ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: KPSC ನೇಮಕಾತಿ ಹಗರಣ : ಒಂದು ವರ್ಷದಲ್ಲಿ ಶಿವಶಂಕರಪ್ಪ ಸಾಹುಕಾರ್‌ರ 10 ಕೋಟಿ ರೂ. ವ್ಯವಹಾರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ಶಿವಶಂಕರಪ್ಪ ಸಾಹುಕಾರ್‌ ಅವರ ಬೃಹತ್‌ ಅಕ್ರಮ ಹಣಕಾಸು ವ್ಯವಹಾರ ಬೆಳಕಿಗೆ ಬಂದಿದೆ. ಸಾಹುಕಾರ್ ಅವರು ಕೇವಲ ಒಂದು ವರ್ಷದಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿಗಳ ಅಕ್ರಮ ವ್ಯವಹಾರ ನಡೆಸಿರುವುದು ತಿಳಿದುಬಂದಿದೆ.

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಜೊತೆ ಕೈಜೋಡಿಸಿದ್ದ ಶಿವಶಂಕರಪ್ಪ ಸಾಹುಕಾರ್, ಆಗಸ್ಟ್ 2025 ಮತ್ತು ಡಿಸೆಂಬರ್ ಅವಧಿಯಲ್ಲಿ ಉದ್ಯಮಿಯಿಂದ ಬರೋಬ್ಬರಿ 4.99 ಕೋಟಿ ರೂಪಾಯಿ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ನಿಖರ ಮಾಹಿತಿಯ ಮೇರೆಗೆ ಇಡಿ ಅಧಿಕಾರಿಗಳು ರಿಯಲ್ ಎಸ್ಟೇಟ್ ಉದ್ಯಮಿಯ ನಿವಾಸ ಮತ್ತು ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ರಿಯಲ್ ಎಸ್ಟೇಟ್ ಉದ್ಯಮಿಯ ಕಾರಿನಲ್ಲಿ ಹಲವು ಪ್ರಮುಖ ದಾಖಲೆಗಳು ಹಾಗೂ ಕೈಬರಹದ ಪ್ರತಿಯೊಂದು ಡೈರಿ ಸಿಕ್ಕಿಬಿದ್ದಿದೆ. ಈ ಕೈಬರಹದ ದಾಖಲೆಗಳನ್ನು ಪರಿಶೀಲಿಸಿದಾಗ ಸಾಹುಕಾರ್ ಅವರ ಕೋಟ್ಯಂತರ ರೂಪಾಯಿಗಳ ಕಪ್ಪುಹಣದ ವಹಿವಾಟು ಹಾಗೂ ನೇಮಕಾತಿ ಹಗರಣದ ಕರಾಳ ಮುಖ ಸಂಪೂರ್ಣವಾಗಿ ಬಯಲಾಗಿದೆ. ಸದ್ಯ ಇಡಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Edited By :
PublicNext

PublicNext

29/10/2026 03:22 pm

Cinque Terre

4.07 K

Cinque Terre

0

ಸಂಬಂಧಿತ ಸುದ್ದಿ