ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: ಪದವೀಧರ – ಶಿಕ್ಷಕರ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಕಪಾಳಮೋಕ್ಷ - ರವಿಕುಮಾರ್

ಬಳ್ಳಾರಿ: ವಿಧಾನ ಪರಿಷತ್ತಿನ ಪದವೀಧರ–ಶಿಕ್ಷಕರ ಕ್ಷೇತ್ರಗಳ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲುಣಿಸುವ ಮೂಲಕ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ ಅಪಪ್ರಚಾರದ ವಿರುದ್ಧ ನವೆಂಬರ್ 2ರಿಂದ 6 ರವರೆಗೆ ರಾಜ್ಯದ ಹತ್ತು ಕಡೆಗಳಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷಣೆಯೊಂದಿಗೆ ಜನಜಾಗೃತಿ ಪಾದಯಾತ್ರೆ ನಡೆಸಲಾಗುವುದು ಎಂದರು. ಇದೇ ವೇಳೆ, ಹಾಲು ಮತ್ತು ಬಸ್ ದರ ಏರಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಹೊನ್ನುರಸ್ವಾಮಿ ಕೆ.ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ

Edited By :
PublicNext

PublicNext

29/10/2026 06:03 pm

Cinque Terre

7.14 K

Cinque Terre

0

ಸಂಬಂಧಿತ ಸುದ್ದಿ