ಕಡೂರು: ಎನ್.ಹೆಚ್. 173 ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಅತಿ ವೇಗದಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೀಲಾನ್ ಷರೀಫ್ ಎಂಬುವವರು ರಸ್ತೆ ದಾಟುತ್ತಿದ್ದಾಗ ಅತಿ ವೇಗದಿಂದ ಬಂದ ತರುಣ್ ಕುಮಾರ್ ಎಂಬುವವರ ಕೆ.ಟಿ.ಎಂ. ಬೈಕ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ನಿಯಂತ್ರಣ ತಪ್ಪಿದ ಬೈಕ್ ಮತ್ತೊಂದು ದ್ವಿಚಕ್ರ ವಾಹನ ಹಾಗೂ ಬಸ್‌ಗೆ ಡಿಕ್ಕಿಯಾಗಿದ್ದು, ತರುಣ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಜೀಲಾನ್ ಷರೀಫ್ ಹಾಗೂ ಮಂಜುನಾಥ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Kshetra Samachara
29/10/2026 06:13 pm
LOADING...