ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿಯಲ್ಲಿ ರೌಡಿಗಳ ಪರೇಡ್... ಬಾಲ ಬಿಚ್ಚಿದ್ರೆ ಗಡಿಪಾರು ಫಿಕ್ಸ್..!

ಬಳ್ಳಾರಿ ನಗರದಲ್ಲಿ ರೌಡಿಶೀಟರ್‌ಗಳಿಗೆ ಎಸ್ಪಿ ಡಾ. ಸುಮನ್ ಡಿ. ಪೆನ್ನೇಕರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳ ಪರೇಡ್ ನಡೆಸಿದ ಎಸ್ಪಿ, ಪ್ರತಿಯೊಬ್ಬರ ಹಿನ್ನೆಲೆ ಹಾಗೂ ಹಿಂದಿನ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಮಾಜಿ ಕಾರ್ಪೊರೇಟರ್ ಅಂದ್ರಾಳ್ ಸೀತಾರಾಮ್ ಸೇರಿದಂತೆ ನೂರಕ್ಕೂ ಹೆಚ್ಚು ರೌಡಿಶೀಟರ್‌ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದರು. ಈ ವೇಳೆ, ಹಿಂದೆ ಮಾಡಿದ ತಪ್ಪುಗಳನ್ನೇ ಮತ್ತೆ ಮುಂದುವರಿಸಿದರೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಬಾಲ ಬಿಚ್ಚಿದರೆ ಗಡಿಪಾರಿಗೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರ ಡಿವೈಎಸ್ಪಿ ಗೋವಿಂದರಾಜು ಸೇರಿದಂತೆ ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಬಳ್ಳಾರಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಹೊನ್ನುರಸ್ವಾಮಿ ಕೆ. ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ

Edited By :
PublicNext

PublicNext

29/10/2026 07:20 pm

Cinque Terre

7.97 K

Cinque Terre

0

ಸಂಬಂಧಿತ ಸುದ್ದಿ