ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಕಾರಿನಲ್ಲಿಆಕಸ್ಮಿಕ ಬೆಂಕಿ! - ನಿಂತಲ್ಲೇ ಹೊತ್ತಿ ಉರಿದ ಕಾರು

ಮಂಡ್ಯ: ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ಹೊರವಲಯದ ಹೋಟೆಲ್ ಪಾರ್ಕಿಂಗ್ ಪ್ಲೇಸ್ ನಲ್ಲಿ ದುರ್ಘಟನೆ ಸಂಭವಿಸಿದೆ.

ಎಸಿಯಲ್ಲಿ ಗ್ಯಾಸ್ ಸೋರಿಕೆಯಿಂದ ಕಾಣಿಸಿಕೊಂಡ ಬೆಂಕಿ ಅಂತ ತಿಳಿದು ಬಂದಿದೆ. ಕ್ಷಣಾರ್ಧದಲ್ಲಿ ಟೊಯೊಟಾ ಗ್ಲಾಂಜಾ ಕಾರು ಹೊತ್ತಿ ಉರಿದಿದೆ. ಸ್ಥಳದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣ ಆಗಿದೆ. ಬೆಂಗಳೂರಿನ ಬಾಣಸವಾಡಿಯ ಸಿಂಧು ಎಂಬುವವರ ಕಾರು ಅಂತ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡು ಹಾಕಿದ್ದಾರೆ.

Edited By :
Kshetra Samachara

Kshetra Samachara

29/10/2026 08:32 pm

Cinque Terre

260

Cinque Terre

0

ಸಂಬಂಧಿತ ಸುದ್ದಿ