ರಾಮನಗರ : ಎಕ್ಸ್‌ಪ್ರೆಸ್‌ವೇನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಬೆಂ. ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ಮತ್ತಿಕೆರೆ ಬಳಿ ಈ ಘಟನೆ ನಡೆದಿದೆ. ಎಕ್ಸ್‌ಪ್ರೆಸ್‌ವೇನಿಂದ ಸರ್ವಿಸ್ ರಸ್ತೆಗೆ ಕಬ್ಬಿಣ ತುಂಬಿಕೊಂಡು ಹೋಗುತ್ತಿದ್ದ ಲಾರಿ ಬಿದ್ದಿದೆ.
ಚಾಲಕ ನಿದ್ದೆಗಣ್ಣಿನಲ್ಲಿ ಇದ್ದಿದ್ದರಿಂದ ಎಕ್ಸ್‌ಪ್ರೆಸ್‌ವೇನಿಂದ ಸರ್ವಿಸ್ ರಸ್ತೆಗೆ ಲಾರಿ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತಮಿಳುನಾಡಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಬ್ಬಿಣದ ಲಾರಿ ಇದಾಗಿದೆ ಎನ್ನಲಾಗಿದೆ. ಕ್ರೇನ್ ಮೂಲಕ ಲಾರಿಯನ್ನು ಎತ್ತಿಸಿದ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
30/10/2026 12:02 pm
LOADING...