ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ರಾಪಿಡೋ ವಿರುದ್ಧ ಚಾಲಕರ ಆಕ್ರೋಶ – ಮಡಿಕೇರಿಯಲ್ಲಿ ಆಟೋ, ಟ್ಯಾಕ್ಸಿ ಸಂಚಾರ ಬಂದ್

ಮಡಿಕೇರಿ : ರಾಪಿಡೋ ಬೈಕ್ ಟ್ಯಾಕ್ಸಿ ಸೇವೆ ವಿರುದ್ಧ ಮಡಿಕೇರಿಯಲ್ಲಿ ಆಟೋ ಹಾಗೂ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಪಿಡೋ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಡಿಕೇರಿ ನಗರದಲ್ಲಿ ಆಟೋ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ಆಟೋ ಮಾಲೀಕರು ಹಾಗೂ ಚಾಲಕರ ಸಂಘದ ಪ್ರತಿಭಟನೆಗೆ ನಗರದ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಕೂಡ ಬೆಂಬಲ ಸೂಚಿಸಿದ್ದು, ಟ್ಯಾಕ್ಸಿ ಸಂಚಾರವನ್ನೂ ಸ್ಥಗಿತಗೊಳಿಸಿದ್ದಾರೆ.

ಸರ್ಕಾರಕ್ಕೆ ಸಾವಿರಾರು ರೂಪಾಯಿ ತೆರಿಗೆ ಪಾವತಿಸಿ ಜೀವನ ನಡೆಸುತ್ತಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಬೈಕ್ ಟ್ಯಾಕ್ಸಿ ಸೇವೆಯಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ಬಗ್ಗೆ ಸರ್ಕಾರ ಕೂಡಲೇ ಕ್ರಮ ಕೈಗೊಂಡು ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

30/10/2026 12:24 pm

Cinque Terre

5.04 K

Cinque Terre

0

ಸಂಬಂಧಿತ ಸುದ್ದಿ