ಕುಂದಗೋಳ : 150 ಅಡಿ ಆಳದ ಬಾವಿಗೆ ಬಿದ್ದು ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದ ಎರಡು ವರ್ಷದ ಸಾಕು ನಾಯಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಘಟನೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿರೂಪಾಕ್ಷಪ್ಪ ಮೊರಬದ ಅವರಿಗೆ ಸೇರಿದ ಎರಡು ವರ್ಷದ ಸಾಕು ನಾಯಿ ನಿನ್ನೆ ಆಕಸ್ಮಿಕವಾಗಿ ಆಳವಾದ ಬಾವಿಗೆ ಬಿದ್ದಿದೆ. ಸುಮಾರು 150 ಅಡಿ ಆಳದ ಬಾವಿಯಲ್ಲಿ ಸಿಲುಕಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ನಾಯಿಯನ್ನು ಕಂಡ ಮಾಲೀಕರು ತಡಮಾಡದೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿ, ಕೊನೆಗೂ ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಸಮಯಪ್ರಜ್ಞೆಯಿಂದ ತಕ್ಷಣ ಸ್ಪಂದಿಸಿದ ಸಿಬ್ಬಂದಿ ಮೂಕಪ್ರಾಣಿಯ ಜೀವ ಉಳಿಸಿದ್ದಾರೆ.
ಮಾತು ಬಾರದ ಮೂಕಪ್ರಾಣಿಯ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಜೀವ ಉಳಿಸಿದ ಅಗ್ನಿಶಾಮಕ ದಳದ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ: ಶಾನು ಯಲಿಗಾರ, ಪಬ್ಲಿಕ್ ನೆಕ್ಸ್ಟ್, ಕುಂದಗೋಳ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/10/2026 12:59 pm
LOADING...