ಬೆಳಗಾವಿ : ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ (ಅ.30) ನಗರದ ಜಲ ಶುದ್ಧೀಕರಣ ಘಟಕ ಹಾಗೂ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ತ್ಯಾಜ್ಯ ವಿಲೇವಾರಿ ಘಟಕದ ಸುತ್ತಲಿನ ಪ್ರದೇಶದಲ್ಲಿ ಬೆಳೆಯಲಾಗುವ ಎಲ್ಲ ರೀತಿಯ ಬೆಳೆಗಳು, ತರಕಾರಿಗಳು, ವಾಯು ಮಾಲಿನ್ಯ ವರದಿ, ಹಾಲು ಹಾಗೂ ಮಕ್ಕಳ ಆರೋಗ್ಯ ತಪಾಸಣಾ ವರದಿ, ನಾಯಿ ಕಡಿತ ಹಾಗೂ ನೀರಿನ ಪರೀಕ್ಷಾ ವರದಿಗಳನ್ನು ಸಲ್ಲಿಸಲು ಸೂಚಿಸಿದರು.
ತ್ಯಾಜ್ಯ ವಿಲೇವಾರಿ ಘಟಕದ ವ್ಯಾಪ್ತಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಯಿ ಕಡಿತಕ್ಕೊಳಗಾದ ಜನರ ವರದಿ ಸಲ್ಲಿಸಲು ಸೂಚಿಸಿದ ಅವರು, ಎಲ್ಲ ನಾಯಿಗಳನ್ನು ಹಿಡಿದು ಸ್ಥಳಾಂತರಿಸಲು ಹಾಗೂ ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸೂಚಿಸಿದರು.
ತ್ಯಾಜ್ಯ ವಿಲೇವಾರಿ ಘಟಕದ ಸುತ್ತಲಿನ ಗ್ರಾಮಸ್ಥರು ತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪನಿಬಂಧಕರಾದ ಅರವಿಂದ, ಲೋಕಾಯುಕ್ತ ಎಸ್‌ಪಿ ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
PublicNext
30/10/2026 02:15 pm
LOADING...