ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಕಲುಷಿತ ನೀರಿನ ಆತಂಕ, ಮೂಡಬೋಳದಲ್ಲಿ 100ಕ್ಕೂ ಅಧಿಕ ಜನ ಆಸ್ಪತ್ರೆಗೆ ದಾಖಲು

ಯಾದಗಿರಿ : ಶಹಾಪುರ ತಾಲೂಕಿನ ಮೂಡಬೋಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯ ಶಂಕೆಯಿಂದ 100ಕ್ಕೂ ಅಧಿಕ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಪೂಜಾರಿ ಓಣಿಯಲ್ಲಿ ವಾಂತಿ-ಭೇದಿ ಪ್ರಕರಣಗಳು ಹೆಚ್ಚಾಗಿದ್ದು, ಗ್ರಾಮದ ಹಲವರಲ್ಲಿ ಜ್ವರ, ಸುಸ್ತು, ವಾಂತಿ ಹಾಗೂ ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಕಲುಷಿತ ನೀರು ಸೇವನೆಯೇ ಅಸ್ವಸ್ಥತೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಗೋಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಅವ್ಯವಸ್ಥೆಯೇ ಸಮಸ್ಯೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಗ್ರಾಮದಲ್ಲಿ ಪರಿಸ್ಥಿತಿ ಉಲ್ಬಣಗೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಹಾಪುರ ಮತಕ್ಷೇತ್ರದ ಮೂಡಬೋಳ ಗ್ರಾಮದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯ ಆತಂಕ ಎದುರಾಗಿದ್ದು, ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಒದಗಿಸುವುದರ ಜೊತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Edited By :
PublicNext

PublicNext

30/10/2026 03:37 pm

Cinque Terre

8.76 K

Cinque Terre

0

ಸಂಬಂಧಿತ ಸುದ್ದಿ