ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ ತಾಲೂಕಿನ ಮಲಾಬಾದ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ; 65 ವರ್ಷದ ವ್ಯಕ್ತಿ ಸಾವು

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಾಬಾದ ಗ್ರಾಮದಲ್ಲಿ ಎಕ್ಸೆಲ್ ಲೂನಾ ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 65 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಯಶವಂತ ಸಿದ್ದಪ್ಪ ಮಾಳಿ (65) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಯಶವಂತ ಮಾಳಿ ಅವರು ಮೃತಪಟ್ಟಿದ್ದಾರೆ.

ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

Edited By : PublicNext Desk
Kshetra Samachara

Kshetra Samachara

30/10/2026 07:08 pm

Cinque Terre

5.18 K

Cinque Terre

0

ಸಂಬಂಧಿತ ಸುದ್ದಿ