ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಜಿ ವೈದ್ಯಕೀಯ ಕೌನ್ಸೆಲಿಂಗ್: ಆಪ್ಷನ್ಸ್ ದಾಖಲಿಸಲು ನ.2 ಕೊನೆ ದಿನ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿದ್ದು, ಇಚ್ಛೆ, ಆಯ್ಕೆಗಳನ್ನು ದಾಖಲಿಸಲು ನವೆಂಬರ್ 2ರಂದು ಸಂಜೆ 4 ಗಂಟೆಯವರೆಗೆ ಅವಕಾಶ ನೀಡಿದೆ.

ನವೆಂಬರ್ 3ರಂದು ಸಂಜೆ 4ಕ್ಕೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ನ.3ರಂದು ಸಂಜೆ 5ರಿಂದ ನ.5ರ ಬೆಳಿಗ್ಗೆ 10 ಗಂಟೆಯವರೆಗೆ ಆಪ್ಷನ್ಸ್ ಬದಲಿಸಿಕೊಳ್ಳಲು, ಹೊಸದಾಗಿ ಸೇರಿಸಲು, ಅಳಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ನ.5ರಂದು ಸಂಜೆ 8 ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ನ.6ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಮೊದಲ ಸುತ್ತಿಗೆ ದಾಖಲಿಸಿರುವ ಆಪ್ಷನ್ಸ್ ಎರಡನೇ ಸುತ್ತಿಗೂ ಇರುತ್ತವೆ. ಹೀಗಾಗಿ ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಿ. ಎರಡನೇ ಸುತ್ತಿನಲ್ಲಿ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

31/10/2026 02:42 pm

Cinque Terre

588

Cinque Terre

0

ಸಂಬಂಧಿತ ಸುದ್ದಿ