ಮಡಿಕೆರಿ: ಮಡಿಕೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮರಣೆ ಕಾರ್ಯಕ್ರಮ ನಡೆಯಿತು.
ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಸ್ವಾತಂತ್ರ್ಯ ಹೋರಾಟಗಾರ, ಸುಭೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಗಣ್ಯರು ಹೂಗುಚ್ಛ ಇಟ್ಟು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಎ. ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಸೇರಿದಂತೆ ಗಣ್ಯರು ಭಾಗವಹಿಸಿ ಅಪ್ಪಯ್ಯ ಗೌಡರ ಪ್ರತಿಮೆಗೆ ಗೌರವ ಸಲ್ಲಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರು ವಹಿಸಿದ್ದ ಪಾತ್ರ ಹಾಗೂ ಅವರ ಹೋರಾಟದ ಬದುಕು ಮತ್ತು ಯಶೋಗಾಥೆಯನ್ನು ಗಣ್ಯರು ಸ್ಮರಿಸಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಸೇರಿದಂತೆ ವಿವಿಧ ಗೌಡ ಸಮಾಜಗಳ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಪ್ಪಯ್ಯ ಗೌಡರ ಸ್ಮರಣೆಗೆ ಗೌರವ ಅರ್ಪಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಹೋರಾಟವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂಬ ಸಂದೇಶವೂ ಕಾರ್ಯಕ್ರಮದಲ್ಲಿ ಮೂಡಿಬಂತು.
PublicNext
31/10/2026 06:54 pm
LOADING...