ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಒತ್ತುವರಿ ತೆರವು ವೇಳೆ ಬೆಳೆ ನಾಶ, ತಹಶೀಲ್ದಾರ್ ವಿರುದ್ಧ ರೈತರ ಆಕ್ರೋಶ

ಯಾದಗಿರಿ: ವಡಗೇರಾ ತಾಲೂಕಿನ ತೇಕರಾಳ ಗ್ರಾಮದಲ್ಲಿ ನ್ಯಾಯಾಲಯದ ಆದೇಶದಂತೆ ಜಮೀನು ಸ್ವಾಧೀನ ತೆರವು ಕಾರ್ಯಾಚರಣೆ ವೇಳೆ ಪಕ್ಕದ ಜಮೀನುಗಳಲ್ಲಿನ ಹತ್ತಿ ಹಾಗೂ ಜೋಳದ ಬೆಳೆ ನಾಶಪಡಿಸಿದ ಆರೋಪ ಕೇಳಿಬಂದಿದೆ. ಸರ್ವೆ ನಂಬರ್ 253ರಲ್ಲಿನ 27 ಎಕರೆ ಜಮೀನು ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಸುಮಾರು 6 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ ಎಂದು ರೈತರು ಆರೋಪಿಸಿ, ತಹಶೀಲ್ದಾರ್ ಮಂಗಳಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಮೀನಿನಲ್ಲಿ ರೈತರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಟ್ರ್ಯಾಕ್ಟರ್ ಮೂಲಕ ಬೆಳೆ ನಾಶಪಡಿಸಲಾಗಿದೆ ಎಂದು ಆರೋಪಿಸಿದ ರೈತರು, ಹಾನಿಗೊಳಗಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ತಹಶೀಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ರೈತರು ವಾಗ್ವಾದ ನಡೆಸಿದರು. ಜಿಲ್ಲಾಧಿಕಾರಿಗಳ ಮಧ್ಯಸ್ಥಿಕೆಯ ಬಳಿಕ ಪರಿಸ್ಥಿತಿ ತಿಳಿಯಾಯಿತು. ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ರೈತರು ಜಿಲ್ಲಾಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.

Edited By :
PublicNext

PublicNext

31/10/2026 07:57 pm

Cinque Terre

12.48 K

Cinque Terre

0

ಸಂಬಂಧಿತ ಸುದ್ದಿ