ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಪ ಆಳ್ವಾ ಎಂದರೆ ಇಡೀ ಕಾಂಗ್ರೆಸ್ ಪಕ್ಷವಲ್ಲ: ಎ.ಎಸ್ ಪೊನ್ನಣ್ಣ

ಮಡಿಕೇ ರಿ: ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರೇ ಇದ್ದಾರೆ ಎಂಬ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಡಿಕೇರಿಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಪ್ರತಿಕ್ರಿಯೆ ನೀಡಿದ್ದು, ಸ್ಟಿಂಗ್ ವಿಡಿಯೋದಲ್ಲಿ ಕೃಪ ಆಳ್ವಾ ಕಾಣಿಸಿಕೊಂಡಿರುವುದು ನಿಜವಾದರೂ, ಕೃಪ ಆಳ್ವಾ ಎಂದರೆ ಇಡೀ ಕಾಂಗ್ರೆಸ್ ಪಕ್ಷವಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ನಾಯಕರು ಮತ್ತು ಕಾರ್ಯಕರ್ತರಿದ್ದು, ಕೃಪ ಆಳ್ವಾ ಕೂಡ ಒಬ್ಬರು ಕಾಂಗ್ರೆಸ್ ಕಾರ್ಯಕರ್ತೆ, ಒಬ್ಬ ವ್ಯಕ್ತಿ ತಪ್ಪು ಮಾಡಿದರೆ, ಅದನ್ನು ಇಡೀ ಕಾಂಗ್ರೆಸ್ ಪಕ್ಷದ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವಾಗಲಿ ಅಥವಾ ಸರ್ಕಾರವಾಗಲಿ ಸ್ಟಿಂಗ್ ಆಪರೇಷನ್‌ನಲ್ಲಿ ಯಾವುದೇ ಪಾತ್ರವಿಲ್ಲ.

ಈ ವಿಚಾರ ತನಿಖೆಯಿಂದಲೇ ಸ್ಪಷ್ಟವಾಗಿದೆ. ಸ್ಟಿಂಗ್ ಪ್ರಕರಣದ ಹಿಂದೆ ಷಡ್ಯಂತ್ರವಿದೆ ಎಂಬುದು ತನಿಖೆಯಿಂದ ಈಗಾಗಲೇ ಗೊತ್ತಾಗಿದೆ ಎಂದು ತಿಳಿಸಿರುವ ಪೊನ್ನಣ್ಣ, ಹೀಗಾಗಿ ಈ ಪ್ರಕರಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Edited By : PublicNext Desk
PublicNext

PublicNext

01/11/2026 06:38 am

Cinque Terre

3.14 K

Cinque Terre

0

ಸಂಬಂಧಿತ ಸುದ್ದಿ