ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ ಬಿ.ಆರ್.ಯೋಗೇಶ್

ಮಡಿಕೇರಿ : ದೇಶದ ಆರ್ಥಿಕ ಪ್ರಗತಿಯಲ್ಲಿ ಉತ್ಪಾದನೆ ಮತ್ತು ರಫ್ತು ವಹಿವಾಟು ಪ್ರಮುಖ ಪಾತ್ರ ವಹಿಸುತ್ತವೆ. ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ ಮೂಲಕ ದೇಶದ ಜಿಡಿಪಿ ಮತ್ತು ಆರ್ಥಿಕ ಸಂಪತ್ತನ್ನು ಹೆಚ್ಚಿಸಬೇಕಿದೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್. ಯೋಗೀಶ್ ಅವರು ತಿಳಿಸಿದರು.

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನಗರದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ‘ಚೇತನ ಚಿಲುಮೆ’ ಸಭಾಂಗಣದಲ್ಲಿ ಜವಳಿ ವಲಯದ ರಫ್ತು ಉದ್ಯಮಿಗಳಿಗಾಗಿ ಆಯೋಜಿಸಿದ್ದ ‘ಜಾಗತಿಕ ಮಾರುಕಟ್ಟೆಗೆ ಜವಳಿ’ ವಿಷಯಾಧಾರಿತ ರಫ್ತು ಪೆÇ್ರೀತ್ಸಾಹನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದೇಶದಿಂದ ಸುಮಾರು 37 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಜವಳಿ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದ್ದು, 2030ರ ವೇಳೆಗೆ ಈ ಪ್ರಮಾಣವನ್ನು 100 ಬಿಲಿಯನ್ ಅಮೆರಿಕನ್ ಡಾಲರ್‍ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಈ ಗುರಿ ಸಾಧನೆಗಾಗಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡುವುದರೊಂದಿಗೆ ರಫ್ತು ಸಾಮಥ್ರ್ಯ ಹೊಂದಿರುವ ಜಿಲ್ಲೆಗಳನ್ನು ಗುರುತಿಸಿದೆ ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಲಭ್ಯವಿರುವ ಸ್ಥಳೀಯ ಉತ್ಪನ್ನಗಳನ್ನು ಗುಣಮಟ್ಟದೊಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ ಮೂಲಕ ವಿದೇಶಿ ವಿನಿಮಯವನ್ನು ಹೆಚ್ಚಿಸಲು ಅವಕಾಶವಿದೆ. ಇದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಆರ್ಥಿಕ ಸ್ಥಿತಿ ಮತ್ತಷ್ಟು ಬಲಗೊಳ್ಳಲಿದೆ ಎಂದರು.

ರಫ್ತು ಉತ್ತೇಜನ ಮಂಡಳಿಗಳ ಮೂಲಕ ವಿದೇಶಿ ಖರೀದಿದಾರರ ಸಭೆಗಳು, ವ್ಯಾಪಾರ ಮೇಳಗಳು ಹಾಗೂ ಪ್ರದರ್ಶನ ಆಯೋಜಿಸಲಾಗುತ್ತದೆ. ಕೆಲ ಸಂದರ್ಭಗಳಲ್ಲಿ ವಿದೇಶಿ ಖರೀದಿದಾರರನ್ನು ಭಾರತಕ್ಕೆ ಆಹ್ವಾನಿಸಿ ಉದ್ಯಮಿಗಳೊಂದಿಗೆ ನೇರ ಸಂಪರ್ಕ ಕಲ್ಪಿಸಲಾಗುತ್ತದೆ. ಇಂತಹ ಪ್ರದರ್ಶನಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಪ್ರದರ್ಶಿಸುವುದರಿಂದ ವಿದೇಶಿ ಖರೀದಿದಾರರಿಂದ ಆರ್ಡರ್‍ಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

Edited By : PublicNext Desk
PublicNext

PublicNext

01/11/2026 06:57 am

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ