ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಧೀಶರ ಮತ್ತು ಜೆಎಂಎಫ್‍ಸಿ ನ್ಯಾಯಾಲಯವನ್ನು ಸುಪ್ರೀಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಉದ್ಘಾಟಿಸಿದರು. ಹಾಗೆಯೇ ಇ-ಸೇವಾ ಕೇಂದ್ರಕ್ಕೂ ಚಾಲನೆ ನೀಡಿದರು.

ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಸಮಾಜದಲ್ಲಿ ಪ್ರತಿಯೊಬ್ಬ ಶ್ರೀಸಾಮಾನ್ಯನಿಗೂ ಕಾನೂನು ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಹಿರಿಯ ಸಿವಿಲ್ ನ್ಯಾಯಾಲಯವನ್ನು ಉದ್ಘಾಟಿಸಲಾಗಿದೆ ಎಂದರು.

ತಾಲ್ಲೂಕು ಮಟ್ಟದಲ್ಲಿಯೇ ಎಲ್ಲಾ ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸುವುದರಿಂದ ಕಕ್ಷಿದಾರರಿಗೆ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ನ್ಯಾಯಯುತ ಸೌಲಭ್ಯಗಳು ಎಲ್ಲರಿಗೂ ದೊರೆಯಬೇಕು. ನ್ಯಾಯಾಲಯದಲ್ಲಿ ಹಲವು ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಿರಿಯ ಸಿವಿಲ್ ನ್ಯಾಯಾಲಯ ಅತ್ಯಗತ್ಯ ಎಂದು ಎ.ಎಸ್.ಬೋಪಣ್ಣ ಅವರು ಹೇಳಿದರು.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಅವರು ಮಾತನಾಡಿ ರಾಷ್ಟ್ರದ ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಪ್ರಮುಖವಾಗಿದ್ದು, ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ನ್ಯಾಯಾಂಗದ ಮೇಲೆ ಇಂದಿಗೂ ಸಹ ಸಾರ್ವಜನಿಕರಲ್ಲಿ ವಿಶ್ವಾಸ ಇದ್ದು, ಅದನ್ನು ಉಳಿಸಿಕೊಂಡು ಹೋಗಬೇಕು. ಕಕ್ಷಿದಾರರಿಗೆ ಕಾಲಮಿತಿಯಲ್ಲಿ ಪ್ರಕರಣ ಇತ್ಯರ್ಥಪಡಿಸಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಸಹ ನಂಬಿಕೆ ಮತ್ತು ವಿಶ್ವಾಸ ಉಳಿಸುವ ಕೆಲಸ ಮಾಡಬೇಕು ಎಂದರು.

ಪೊನ್ನಂಪೇಟೆಯಲ್ಲಿ ಬಹು ವರ್ಷಗಳ ಕನಸು ನನಸಾಗಿದೆ. ಅನೇಕ ಹಿರಿಯ ಹೋರಾಟಗಾರರ ಫಲವಾಗಿ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಆರಂಭವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕೊಡಗು ಭೂಪ್ರದೇಶ ವಿಶಾಲವಾಗಿದ್ದು, ಸಾರ್ವಜನಿಕರು ತಾಲ್ಲೂಕು ಕೇಂದ್ರಕ್ಕೆ ತೆರಳಲು ತುಂಬಾ ತೊಂದರೆ ಆಗಿದ್ದು, ಈ ಹಿನ್ನೆಲೆ ಪೊನ್ನಂಪೇಟೆ ತಾಲ್ಲೂಕು ಕೇಂದ್ರವಾಗಿ ಸಾರ್ವಜನಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಹಂತ ಹಂತವಾಗಿ ದೊರೆಯುತ್ತಿವೆ ಎಂದರು.

ಕಕ್ಷಿದಾರರಿಗೆ ಅನುಕೂಲವಾಗುವಲ್ಲಿ ಹಿರಿಯ ಸಿವಿಲ್ ನ್ಯಾಯಾಲಯ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ನ್ಯಾಯಾಲಯದ ಪ್ರಕರಣಗಳನ್ನು ಸಾಧ್ಯವಾದಷ್ಟು ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಕೊಡಗು ಜಿಲ್ಲೆಯ ಬುಡಕಟ್ಟು ಜನರು ಆರೋಗ್ಯ ಕೇಂದ್ರಕ್ಕೆ ಹೋಗುವುದು ಕಡಿಮೆ. ಆದ್ದರಿಂದ ಸಂಚಾರಿ ಆರೋಗ್ಯ ಸೇವೆ ಕಲ್ಪಿಸಲಾಗಿದೆ. ಅದೇ ರೀತಿ ನ್ಯಾಯಾಲಯ ಹತ್ತಿರ ಇದ್ದಲ್ಲಿ ಕಕ್ಷಿದಾರರು ತೆರಳಿ ನ್ಯಾಯ ಪಡೆಯುತ್ತಾರೆ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು.

ದೇಶದಲ್ಲಿ ಅನೇಕ ಸಮಸ್ಯೆಗಳಿದ್ದು, ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು. ಹಾಗಾದಾಗ ಮಾತ್ರ ಪ್ರತಿಯೊಬ್ಬರಿಗೂ ಸಮಾಜದಲ್ಲಿ ನ್ಯಾಯ ಸಿಗಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು.

ಕರ್ನಾಟಕ ಹೈಕೋರ್ಟ್‍ನ ನ್ಯಾಯಾಧೀಶರಾದ ಎಂ.ಜಿ.ಶುಕುರೆ ಕಮಲ್ ಅವರು ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತವಾಗಿ ಜೀವನ ನಡೆಸಬೇಕು. ಯಾರಲ್ಲೂ ಸಹ ವ್ಯಾಜ್ಯಗಳು ಇರಬಾರದು. ಆ ನಿಟ್ಟಿನಲ್ಲಿ ಬದುಕು ನಡೆಸುವತ್ತ ಗಮನಹರಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು.

ಆಸ್ತಿಗಾಗಿ ಅಕ್ಕ-ತಂಗಿ, ಅಣ್ಣ-ತಮ್ಮಂದಿರ ದಯಾದಿಗಳ ಕಲಹ ಪ್ರತೀ ನಿತ್ಯ ನೋಡುತ್ತೇವೆ. ಇದರಿಂದ ಯಾರಿಗೂ ಸಹ ಒಳಿತಾಗುವುದಿಲ್ಲ. ಬದುಕನ್ನು ಸಹಬಾಳ್ವೆಯಿಂದ ನಡೆಸುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದು ಶುಕುರೆ ಕಮಲ್ ಅವರು ವಿವರಿಸಿದರು.

Edited By : PublicNext Desk
PublicNext

PublicNext

01/11/2026 07:02 am

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ