ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ 11ನೇ ಬ್ಯಾಚ್‍ನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ವೈಟ್‍ಕೋಟ್ ಸಮಾರಂಭವು ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಅವರ ಮಾರ್ಗದರ್ಶನದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಜೀವರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ನೂತನವಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಪಯಣಕ್ಕೆ ನಾಂದಿ ಹಾಡಿದ ಈ ಸಮಾರಂಭವು ಎಲ್ಲರಿಗೂ ಸ್ಮರಣೀಯ ಕ್ಷಣವಾಗಿ ಮೂಡಿಬಂದಿತು.

ಕಾರ್ಯಕ್ರಮದಲ್ಲಿ ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆಯ ವೈದ್ಯಕೀಯ ಪ್ರಾಂಶುಪಾಲರು ಹಾಗೂ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿಶಾಲ್ ಕುಮಾರ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ವೈಟ್ ಕೋಟ್ ಸಮಾರಂಭದ ಮಹತ್ವ, ವೈದ್ಯಕೀಯ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ವೈದ್ಯಕೀಯ ವೃತ್ತಿಯಲ್ಲಿರಬೇಕಾದ ಬದ್ಧತೆ ಮತ್ತು ಸೇವಾ ಮನೋಭಾವದ ಕುರಿತು ತಿಳಿಸಿದರು.

ಮುಖ್ಯ ಆಡಳಿತಾಧಿಕಾರಿ ರೋಹಿಣಿ, ಸ್ನಾತಕೋತ್ತರ ವಿಭಾಗದ ಪ್ರಾಂಶುಪಾಲರು ಡಾ.ಈಶಾ ಬಿ.ರಾವ್ ಹಾಗೂ ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್ ಎಚ್.ಕೆ. ಅವರು ನೂತನ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ವೃತ್ತಿಪರತೆ, ಶಿಸ್ತು, ಸಮರ್ಪಣೆ, ಮಾನವೀಯತೆ, ಕರುಣೆ ಹಾಗೂ ರೋಗಿಗಳ ಸೇವೆಯ ಮಹತ್ವ ವಿವರಿಸಿದರು.

Edited By : PublicNext Desk
Kshetra Samachara

Kshetra Samachara

01/11/2026 07:03 am

Cinque Terre

140

Cinque Terre

0

ಸಂಬಂಧಿತ ಸುದ್ದಿ