ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಉಚಿತ ಆಂಬ್ಯುಲೆನ್ಸ್, ವೈದ್ಯಕೀಯ ಸೇವೆ

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಅದ್ಧೂರಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಜಯ ಆರ್ಥೋ ಆ್ಯಂಡ್ ಟ್ರಾಮಾ ಸೆಂಟರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಹಾಗೂ ವೈದ್ಯಕೀಯ ಸೇವೆಯ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯೋತ್ಸವದ ಮೆರವಣಿಗೆ ಹಾಗೂ ಸಂಭ್ರಮದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಏಕಾಏಕಿ ಆರೋಗ್ಯ ಸಮಸ್ಯೆ ಎದುರಾದರೆ ತಕ್ಷಣ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ನಗರದ ಎರಡು ಪ್ರಮುಖ ಸ್ಥಳಗಳಲ್ಲಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ.

ಬೆಳಗಾವಿಯ ಗೋಡ್ಸೆ ಕಾಂಪೌಂಡ್ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಸಮೀಪದ ಬಿಲ್ಡ್ ಹೋಟೆಲ್ ಬಳಿ ತಲಾ ಒಂದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಈ ಎರಡೂ ಸ್ಥಳಗಳಲ್ಲಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದ್ಯರು ಕೂಡ ಲಭ್ಯವಿರಲಿದ್ದು, ಸಾರ್ವಜನಿಕರಿಗೆ ಸಂಪೂರ್ಣ ಉಚಿತ ವೈದ್ಯಕೀಯ ಸೇವೆ ದೊರೆಯಲಿದೆ.

ಈ ಕುರಿತು ಮಾಹಿತಿ ನೀಡಿದ ವಿಜಯ ಆರ್ಥೋ ಆ್ಯಂಡ್ ಟ್ರಾಮಾ ಸೆಂಟರ್‌ನ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್, ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸುವ ಯಾವುದೇ ವ್ಯಕ್ತಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯಕೀಯ ನೆರವು ಪಡೆಯಬಹುದು. ಸಾರ್ವಜನಿಕರ ಅನುಕೂಲಕ್ಕಾಗಿ ಈ ಉಚಿತ ಸೇವೆ ಒದಗಿಸಲಾಗಿದ್ದು, ಅಗತ್ಯವಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯೋತ್ಸವದ ಸಂಭ್ರಮದ ನಡುವೆ ಸಾರ್ವಜನಿಕರ ಆರೋಗ್ಯ ಕಾಳಜಿಗೆ ಮುಂದಾಗಿರುವ ವಿಜಯ ಆ್ಯಂಡ್ ಟ್ರಾಮಾ ಸೆಂಟರ್‌ನ ಈ ಸೇವೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Edited By :
PublicNext

PublicNext

01/11/2026 09:07 am

Cinque Terre

7.39 K

Cinque Terre

0

ಸಂಬಂಧಿತ ಸುದ್ದಿ