ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜೃಂಭಣೆಯ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಚಾಮರಾಜನಗರ : ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ 71ನೇ ರಾಜ್ಯೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು.

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ 71ನೇ ರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ತೆರೆದ ವಾಹನದಲ್ಲಿ ಸಾಗಿ ಪೊಲೀಸ್ ತುಕಡಿ ಹಾಗೂ ವಿದ್ಯಾರ್ಥಿಗಳ ತಂಡಗಳನ್ನು ಪರಿಚಯ ಮಾಡಿಕೊಂಡರು.

ಈ ಭಾರಿಯ 71ನೇ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ 9ಕ್ಕೂ ಹೆಚ್ಚು ಶಾಲೆಗಳ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾ ರ್ಥಿಗಳು ಹಾಗೂ ಪೊಲೀಸ್ ತುಕಡಿ, ಅರಣ್ಯ, ಅಬಕಾರಿ, ಗೃಹರಕ್ಷಕದಳ, ನಗರಸಭೆಯ ಸಿಬ್ಬಂದಿ ಆಕರ್ಷಕ ಪಥ ಸಂಚಲನ ನಡೆಸಿ ನೋಡುಗರನ್ನು ತಮ್ಮತ್ತ ಆಕರ್ಷಿಸಿದರು.

Edited By : PublicNext Desk
PublicNext

PublicNext

01/11/2026 10:02 am

Cinque Terre

6.64 K

Cinque Terre

0

ಸಂಬಂಧಿತ ಸುದ್ದಿ