ಚಾಮರಾಜನಗರ:ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿದರು.
ಬಳಿಕ ನಡೆದ ಆಕರ್ಷಕ ಪಥಸಂಚಲನದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಭಾಗವಹಿಸಿ ನೋಡುಗರ ಗಮನ ಸೆಳೆದರು. ಈ ವೇಳೆ ಜಿಲ್ಲಾಧಿಕಾರಿಗಳಾದ ಶ್ರೀರೂಪ, ಎಸ್.ಪಿ. ಮುತ್ತುರಾಜ್ ಹಾಗೂ ಸಿ.ಇ.ಒ. ಆಕೃತಿ ಬನ್ಸಾಲ್ ಸೇರಿದಂತೆ ಜಿಲ್ಲೆಯ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಥ್ ನೀಡಿದರು.
PublicNext
01/11/2026 10:49 am
LOADING...