ಕೊಪ್ಪಳ: ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ಮತ್ತಷ್ಟು ಕಾರ್ಖಾನೆಗಳ ವಿಸ್ತರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಕೊಪ್ಪಳ ಬಚಾವೋ ಆಂದೋಲನ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಉದ್ದೇಶದಿಂದ ಶನಿವಾರ ಸ್ವಯಂಪ್ರೇರಿತ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿತ್ತು.
ಬಂದ್‌ಗೆ ನಗರದ ವ್ಯಾಪಾರಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳೂ ರಜೆ ಘೋಷಿಸುವ ಮೂಲಕ ಬಂದ್‌ಗೆ ಕೈಜೋಡಿಸಿವೆ ಎಂದು ಹೋರಾಟಗರು ತಿಳಿಸಿದ್ದಾರೆ.
ಇನ್ನು ಬೆಳಗ್ಗೆಯಿಂದ ಸ್ಥಗಿತಗೊಂಡಿದ್ದ ಬಸ್ ಹಾಗೂ ಆಟೋ ಸಂಚಾರ ನಗರದಲ್ಲಿ ಪುನರಾರಂಭಗೊಂಡಿದ್ದು, ಸಾರ್ವಜನಿಕರ ಓಡಾಟ ಸಹಜ ಸ್ಥಿತಿಗೆ ಮರಳಿದೆ.
ಕಾರ್ಖಾನೆಗಳ ವಿಸ್ತರಣೆ ತಡೆದು ಪರಿಸರ ಸಂರಕ್ಷಣೆ ಮಾಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ಪೂರ್ಣಗೊಂಡಿರುವುದು ಗಮನಾರ್ಹವಾಗಿದೆ.
PublicNext
01/11/2026 12:41 pm
LOADING...