ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: “ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ”, ಹಾಲಿನ ದರ ಏರಿಕೆಗೆ ಬಿಜೆಪಿ ಆಕ್ರೋಶ

ಬಳ್ಳಾರಿ: ರಾಜ್ಯ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಿರುವುದನ್ನು ಖಂಡಿಸಿ ಬಳ್ಳಾರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು.

ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ ಹಾಲಿನ ಕ್ಯಾನ್ ಹಾಗೂ ಪ್ಯಾಕೆಟ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳ ಹಣವನ್ನು ಜನರಿಂದಲೇ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಹಾಲಿನ ದರದ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಏರಿಕೆ ಕಂಡಿರಲಿಲ್ಲ. ಒಂದಿಲ್ಲೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ ಜನರು ಬದುಕುವುದಾದರೂ ಹೇಗೆ ಎಂದು ಸರ್ಕಾರವನ್ನು ಪ್ರಶ್ನಿಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬಿಜೆಪಿ ಮುಖಂಡರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರಿಗೆ ಮನವಿ ಸಲ್ಲಿಸಿ, ಹಾಲಿನ ದರ ಏರಿಕೆಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಹೆಚ್. ಹನುಮಂತಪ್ಪ, ಹಂಪಿ ರಮಣ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Edited By :
PublicNext

PublicNext

01/11/2026 12:48 pm

Cinque Terre

4.81 K

Cinque Terre

0

ಸಂಬಂಧಿತ ಸುದ್ದಿ