ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌ಗೆ ಘೇರಾವ್ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಕಬ್ಬಿಗೆ ಸೂಕ್ತ ಬೆಲೆ ಹಾಗೂ ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸಚಿವರನ್ನು ಪ್ರಶ್ನಿಸಿದಾಗ, ರೈತರು ಮತ್ತು ಸಚಿವರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಎಂ. ಬಿ. ಪಾಟೀಲ್, ‘ನಾನು ನಿಮ್ಮ ಭೂಮಿಗೆ ನೀರು ಕೊಟ್ಟಿರುವುದರಿಂದಲೇ ಇಂದು ನೀವು ಕಬ್ಬು ಬೆಳೆದಿದ್ದೀರಿ ಎಂಬುದನ್ನು ಮರೆಯಬೇಡಿ’ ಎಂದು ರೈತರನ್ನು ತರಾಟೆಗೆ ತೆಗೆದುಕೊಂಡರು.
‘ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಪರವಾಗಿದೆ. ನಿಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಹೀಗಾಗಿ ತಾಳ್ಮೆ ವಹಿಸಿ’ ಎಂದು ರೈತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.
ಆದರೆ, ಸಚಿವರ ಮಾತಿನಿಂದ ಮತ್ತಷ್ಟು ಆಕ್ರೋಶಗೊಂಡ ರೈತರು ಪ್ರತಿಭಟನೆ ಮುಂದುವರಿಸಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ, ಲಾಠಿ ಬೀಸುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಿದರು ಎನ್ನಲಾಗಿದೆ.
PublicNext
01/11/2026 01:01 pm
LOADING...