ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಈರುಳ್ಳಿ ಬೆಳೆದ ರೈತರ ಕಣ್ಣಲ್ಲಿ ಕಣ್ಣೀರು!

ಗದಗ: ಮಳೆ ಕೊರತೆಯಿಂದ ಈಗಾಗಲೇ ಈರುಳ್ಳಿ ಇಳುವರಿ ಕುಸಿತ ಕಂಡಿದ್ದು, ಇದೀಗ ಮಾರುಕಟ್ಟೆಯಲ್ಲೂ ಸೂಕ್ತ ಬೆಲೆ ಸಿಗದೇ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗದಗ ಎಪಿಎಂಸಿಯಲ್ಲಿ ಈರುಳ್ಳಿ ದರ ದಿಢೀರ್ ಕುಸಿತ ಕಂಡಿದ್ದು, ಪ್ರತಿ ಕ್ವಿಂಟಾಲ್‌ಗೆ ₹500ರಿಂದ ₹4 ಸಾವಿರದವರೆಗೆ ಬೆಲೆ ಸಿಗುತ್ತಿದೆ. ಇತ್ತೀಚೆಗೆ ₹5ರಿಂದ ₹6 ಸಾವಿರಕ್ಕೆ ಮಾರಾಟವಾಗುತ್ತಿದ್ದ ಈರುಳ್ಳಿ ದರ ಏಕಾಏಕಿ ಇಳಿಕೆಯಾಗಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂದು ಎಕರೆ ಈರುಳ್ಳಿ ಬೆಳೆಯಲು ₹25 ರಿಂದ ₹30 ಸಾವಿರ ಖರ್ಚಾಗುತ್ತದೆ. ಆದರೆ ಮಳೆ ಕೊರತೆಯಿಂದ ಕೆಲ ರೈತರಿಗೆ ಕೇವಲ ಮೂರು ಚೀಲ ಇಳುವರಿ ಬಂದಿದೆ. ಮಾರಾಟದಿಂದ ಬಂದ ಹಣ ಗೊಬ್ಬರದ ಖರ್ಚಿಗೂ ಸಾಲುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಮಾರುಕಟ್ಟೆಯಲ್ಲಿ ಖರೀದಿದಾರರು ಕಡಿಮೆ ಪ್ರಮಾಣದ ಈರುಳ್ಳಿಗೆ ಹೆಚ್ಚಿನ ದರ ನೀಡಿ, ಹೆಚ್ಚಿನ ಪ್ರಮಾಣದಲ್ಲಿ ತಂದಾಗ ಕಡಿಮೆ ಬೆಲೆ ನೀಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಕಷ್ಟಪಟ್ಟು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೇ ರೈತರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಕೂಡಲೇ ಈರುಳ್ಳಿಗೆ ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರ ಆರಂಭಿಸಬೇಕು. ಇಲ್ಲದಿದ್ದರೆ ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ ಎಂದು ರೈತರು ಒತ್ತಾಯಿಸಿದ್ದಾರೆ.

Edited By :
PublicNext

PublicNext

01/11/2026 01:05 pm

Cinque Terre

4.81 K

Cinque Terre

1

ಸಂಬಂಧಿತ ಸುದ್ದಿ