ಚಾಮರಾಜನಗರ: ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದ ಭುವನೇಶ್ವರಿ ವೃತ್ತದ ಬಳಿ ಕನ್ನಡಪರ ಹೋರಾಟಗಾರರು ಖಾಲಿ ಹಾಲಿನ ಪ್ಯಾಕೆಟ್‌ಗಳನ್ನು ಕೈಯಲ್ಲಿ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಹಾಲಿನ ಬೆಲೆ ಏರಿಕೆಯನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರೈತರಿಗೆ ಪ್ರೋತ್ಸಾಹಧನ ಅಥವಾ ಹೆಚ್ಚಿನ ಬೆಲೆ ನೀಡಬೇಕಾದರೆ ಸರ್ಕಾರ ತನ್ನ ಖಜಾನೆಯಿಂದ ಅಥವಾ ಹಾಲು ಒಕ್ಕೂಟಗಳ ಲಾಭದಿಂದ ನೀಡಬೇಕೇ ಹೊರತು, ಸಾರ್ವಜನಿಕರ ಜೇಬಿಗೆ ಕನ್ನ ಹಾಕುವುದು ಸರಿಯಲ್ಲ. ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದಲೇ ಈ ಹೊರೆಯನ್ನು ಸಾಮಾನ್ಯ ಜನರ ಮೇಲೆ ಹೊರಿಸಲಾಗುತ್ತಿದೆ ಎಂದು ಕಿಡಿಕಾರಿದರು.
PublicNext
01/11/2026 01:14 pm
LOADING...