ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಬಳಸುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಪ್ರಿಯದರ್ಶಿನಿ ಕ್ಯಾಂಟೀನ್ ಸೇರಿದಂತೆ ಮಂದಿಹೌಸ್, ಫಿರೋಜ್ ಹೋಟೆಲ್, ಪಲ್ಲವಿ ಹೋಟೆಲ್, ಅಮನ್ ಫ್ಯಾಮಿಲಿ ರೆಸ್ಟೋರೆಂಟ್, ಭುವನ ಟಿಫನ್ ಸೆಂಟರ್, ಅಭಿರುಚಿ ಫ್ಯಾಮಿಲಿ ರೆಸ್ಟೋರೆಂಟ್ ಹಾಗೂ ಶ್ರೀ ಗಜಾನನ ಹೋಟೆಲ್ ಸೇರಿದಂತೆ ವಿವಿಧ ಹೋಟೆಲ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಈ ವೇಳೆ ಅಕ್ರಮವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಒಟ್ಟು 26 ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿ ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದ ಅಂಗಡಿ ಮಾಲೀಕರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ಧತೆ ನಡೆಸಿದೆ.
ಇನ್ನು ಮುಂದೆ ಜಿಲ್ಲೆಯಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಪುರುಷೋತ್ತಮ್ ನಾಯಕ್ ಪಬ್ಲಿಕ್ ನೆಕ್ಸ್ಟ್ ಸುರಪುರ
Kshetra Samachara
01/11/2026 01:34 pm
LOADING...