ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ - 15ಕ್ಕೂ ಹೆಚ್ಚು ಹೋರಾಟಗಾರರು ಪೊಲೀಸ್ ವಶಕ್ಕೆ

ಕಲಬುರಗಿ : ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಕೂಗು ಮತ್ತೆ ಕೇಳಿಬಂದಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿರುವ ಹೋರಾಟಗಾರರು, ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಇಂದು ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದರು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಧ್ವಜಾರೋಹಣ ಮಾಡಲು ತೆರಳುತ್ತಿದ್ದ ಹೋರಾಟಗಾರರನ್ನು ಕೋರ್ಟ್ ಸರ್ಕಲ್ ಬಳಿ ಪೊಲೀಸರು ತಡೆದು ವಶಕ್ಕೆ ಪಡೆದರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಬೋಳಿ ಸೇರಿದಂತೆ 15ಕ್ಕೂ ಹೆಚ್ಚು ಹೋರಾಟಗಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.

Edited By :
PublicNext

PublicNext

01/11/2026 01:53 pm

Cinque Terre

2.96 K

Cinque Terre

0

ಸಂಬಂಧಿತ ಸುದ್ದಿ