ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ : ಬಸ್ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ಬೈಕ್‌ಗಳ ಮೇಲೆ ಉರುಳಿದ ಬೃಹತ್ ಮರ – ನೂರಾರು ಬೈಕ್‌ಗಳು ಜಖಂ!

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದ ಬಸ್ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ಏಕಾಏಕಿ ಬೃಹತ್ ಮರವೊಂದು ಬುಡ ಸಮೇತ ಉರುಳಿಬಿದ್ದ ಪರಿಣಾಮ ನೂರಾರು ಬೈಕ್‌ಗಳು ಜಖಂಗೊಂಡಿವೆ.

ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಬೈಕ್‌ಗಳ ಮೇಲೆ ಮರ ಬಿದ್ದಿದ್ದು, ಈ ವೇಳೆ ಹಲವರ ಪ್ರಾಣಾಪಾಯ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬೈಕ್ ಸವಾರರೊಬ್ಬರು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದ ಶಿಥಿಲಗೊಂಡ ಮರಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂದು ಈ ಘಟನೆ ಸಂಭವಿಸಿದ್ದು, ಹಲವು ಬೈಕ್‌ಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರ ಬಿದ್ದು ಬೈಕ್‌ಗಳು ಜಖಂಗೊಂಡಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಬೈಕ್ ಮಾಲೀಕರು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಈ ಘಟನೆ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Edited By :
PublicNext

PublicNext

01/11/2026 02:33 pm

Cinque Terre

6.69 K

Cinque Terre

0

ಸಂಬಂಧಿತ ಸುದ್ದಿ