ಚಿಕ್ಕಮಗಳೂರು : ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರ ಗೈರಿನಲ್ಲಿ ನಡೆದ ಈ ಮಹತ್ವದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಹಾಗೂ ಧ್ವಜ ವಂದನೆ ಸ್ವೀಕರಿಸಿದರು.
ನಾಡಹಬ್ಬದ ಪ್ರಮುಖ ಆಕರ್ಷಣೆಯಾಗಿ ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 23 ತಂಡಗಳು ಆಕರ್ಷಕ ಪಥಸಂಚಲನ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು.
ಈ ಸಂದರ್ಭದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಗಾಯತ್ರಿ ಶಾಂತೇಗೌಡ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ನಾಡಹಬ್ಬದ ಸಂಭ್ರಮದಲ್ಲಿ ಭಾಗಿಯಾದರು.
Kshetra Samachara
01/11/2026 04:34 pm
LOADING...