ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿವಿಧ ಮಹನೀಯರ ವೇಷಧರಿಸಿದ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು

ಶಿರಹಟ್ಟಿ : ಪಟ್ಟಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮ ಹಾಗೂ ಕನ್ನಡಾಭಿಮಾನದಿಂದ ಆಚರಿಸಲಾಯಿತು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಆರ್ಕೆಸ್ಟ್ರಾ ತಂಡದೊಂದಿಗೆ ಟ್ರ್ಯಾಕ್ಟರ್‌ಗಳಲ್ಲಿ ವಿದ್ಯಾರ್ಥಿಗಳು ವಿವಿಧ ಮಹನೀಯರ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು.

ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಫ್.ಎಂ. ದಬಾಲಿ ತಾಲೂಕು ಕ್ರೀಡಾಂಗಣ ತಲುಪಿತು. ಮೆರವಣಿಗೆಯುದ್ದಕ್ಕೂ ಕನ್ನಡ ಬಾವುಟಗಳು, ಕನ್ನಡಪರ ಘೋಷಣೆಗಳು ಹಾಗೂ ಮಹನೀಯರ ವೇಷಧರಿಸಿದ ವಿದ್ಯಾರ್ಥಿಗಳು ಸಾರ್ವಜನಿಕರ ಗಮನ ಸೆಳೆದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್, ಕನ್ನಡ ಭಾಷೆಯ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ನಾಡಿನ ಏಕತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ, ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಒಟ್ಟಾರೆ, ಕನ್ನಡ ರಾಜ್ಯೋತ್ಸವ ಆಚರಣೆಯು ಪಟ್ಟಣದಲ್ಲಿ ಹಬ್ಬದ ವಾತಾವರಣ ಮೂಡಿಸಿತು.

ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ಚುನಾಯಿತ ಪ್ರತಿನಿಧಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Edited By : Vinayak Patil
PublicNext

PublicNext

01/11/2026 04:48 pm

Cinque Terre

6.1 K

Cinque Terre

0

ಸಂಬಂಧಿತ ಸುದ್ದಿ