ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಆಯೋಜನೆಗೊಂಡಿದ್ದ 71ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ವಿಜಯನಗರ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಧ್ವಜಾರೋಹಣ ನೆರವೇರಿಸಿದರು.
ಹೊಸಪೇಟೆ ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಬಸವಂತಪ್ಪ, ತೆರೆದ ವಾಹನದಲ್ಲಿ ತೆರಳಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಕರ್ನಾಟಕ ರಾಜ್ಯೋತ್ಸವ ಧ್ವಜಾರೋಹಣ ವೇಳೆ ಶಾಸಕ ಹೆಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಸಿಇಓ ಗರಿಮಾ ಪನ್ವಾರ್, ಎಸ್ಪಿ ಎಸ್. ಜಾಹ್ನವಿ, ಡಿಸಿಎಫ್ ಅನುಪಮಾ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
PublicNext
01/11/2026 04:58 pm
LOADING...