ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ರಾಜ್ಯೋತ್ಸವಕ್ಕೆ ಅದ್ಧೂರಿ ಮೆರುಗು; ಕರವೇ ಧ್ವಜಕಟ್ಟೆಯಲ್ಲಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ ಬಣದ ವತಿಯಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್‌ನ ಇಂದಿರಾ ಕ್ಯಾಂಟೀನ್ ಮುಂಭಾಗ ನಿರ್ಮಿಸಿರುವ ಶಾಶ್ವತ ಕನ್ನಡ ಧ್ವಜಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಕರಾವಳಿ ಭಾಗದಲ್ಲಿ ಕರವೇ ಸೈನಿಕರ ಸಂಘಟಿತ ಪ್ರಯತ್ನದಿಂದ ನಿರ್ಮಾಣಗೊಂಡಿರುವ ಶಾಶ್ವತ ಧ್ವಜಕಟ್ಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಅವರು ದೀಪ ಬೆಳಗಿಸಿ ಪುಷ್ಪಾರ್ಚನೆ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕು ಕರವೇ ಅಧ್ಯಕ್ಷ ಶಿವ ಆರ್. ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರವೇ ಕುಂದಾಪುರ ಗೌರವಾಧ್ಯಕ್ಷ ಕೆ.ಆರ್. ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿ ಕರವೇ ಸೈನಿಕರಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಮಾಜಸೇವಕ ಹುಸೇನ್ ಹೈಕಾಡಿ, ಕರವೇ ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಗೀತಾ ಕೃಷ್ಣ ಪಂಗಳಾ, ಕುಂದಾಪುರ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ರಮೇಶ್ ಕೃಷ್ಣ ಪಂಗಳಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ದೂರವಾಣಿ ಕರೆ ಮೂಲಕ ಕುಂದಾಪುರ ಹಾಗೂ ಬೈಂದೂರು ಭಾಗದ ಕರವೇ ಸೈನಿಕರಿಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಮುಂದಿನ ಎರಡು ತಿಂಗಳೊಳಗೆ ಕುಂದಾಪುರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ, ಕರವೇ ಗೌರವಾಧ್ಯಕ್ಷ ಕೆ.ಆರ್. ನಾಯ್ಕ್ ಹಾಗೂ ಆಟೋ ಚಾಲಕ ವೆಂಕಟೇಶ್ ಖಾರ್ವಿ ಅವರನ್ನು ಕರವೇ ಸೈನಿಕರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇನ್ನು ಕುಂದಾಪುರ ಹಾಗೂ ಬೈಂದೂರು ಭಾಗದ ಕರವೇ ಸೈನಿಕರ ವತಿಯಿಂದ ತಾಲೂಕು ಅಧ್ಯಕ್ಷ ಶಿವ ಆರ್. ಪೂಜಾರಿ ಅವರಿಗೆ ಅದ್ಧೂರಿ ಸನ್ಮಾನ ನೆರವೇರಿಸಲಾಯಿತು. ಕರವೇ ಗೌರವಾಧ್ಯಕ್ಷ ಆನಂದ್ ಸಿ. ಕುಂದರ್ ಹಾಗೂ ಕಂಡ್ಲೂರು ದಸ್ತಗಿರಿ ಸಾಹೇಬ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಕ್ಕಳು, ಮಹಿಳೆಯರು, ಸಾರ್ವಜನಿಕರು ಹಾಗೂ ಕನ್ನಡಾಭಿಮಾನಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡದ ಅಭಿಮಾನ ಮೆರೆದರು. ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಗೆ ಲಡ್ಡು, ತಂಪು ಪಾನೀಯ ಹಾಗೂ ಲಘು ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಒಟ್ಟಾರೆಯಾಗಿ, ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಕರವೇ ವತಿಯಿಂದ ನಿರ್ಮಿಸಿರುವ ಶಾಶ್ವತ ಕನ್ನಡ ಧ್ವಜಕಟ್ಟೆಯಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡಾಭಿಮಾನಿಗಳ ಸಂಭ್ರಮಕ್ಕೆ ಸಾಕ್ಷಿಯಾಯಿತು.

Edited By : Vinayak Patil
PublicNext

PublicNext

01/11/2026 07:40 pm

Cinque Terre

16.67 K

Cinque Terre

0

ಸಂಬಂಧಿತ ಸುದ್ದಿ