ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಕ್ಕೆ ವಿಳಂಬ

ಮಡಿಕೇರಿ: ನಾಡಿನಾದ್ಯಂತ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದರೆ, ಮಡಿಕೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಕ್ಕೆ ವಿಳಂಬವಾದ ಘಟನೆ ನಡೆದಿದೆ.

ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದ್ದರೂ, ನಿಗದಿತ ಸಮಯ ಕಳೆದರೂ ಧ್ವಜಾರೋಹಣ ನೆರವೇರಲಿಲ್ಲ. ಸುಮಾರು 25 ನಿಮಿಷ ಕಳೆದರೂ ಕಾರ್ಯಕ್ರಮ ಆರಂಭವಾಗದೆ, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಧ್ವಜಾರೋಹಣಕ್ಕಾಗಿ ಕಾದು ಕುಳಿತುಕೊಳ್ಳುವಂತಾಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಅವರು ಸುಮಾರು 30 ನಿಮಿಷ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಬಳಿಕ ಧ್ವಜಾರೋಹಣ ನೆರವೇರಿಸಲಾಯಿತು.

ಇದೇ ವೇಳೆ ಪಥಸಂಚಲನದಲ್ಲಿ ಭಾಗವಹಿಸಲು ಆಗಮಿಸಿದ್ದ ವಿದ್ಯಾರ್ಥಿಗಳು ಕೂಡ ದೀರ್ಘಕಾಲ ಕಾದು ನಿಲ್ಲಬೇಕಾಯಿತು. ಬಿರುಬಿಸಿಲಿನ ನಡುವೆ ಕಾಯುವಿಕೆ ಮುಂದುವರಿದ ಪರಿಣಾಮ ಕೆಲ ಶಾಲಾ ವಿದ್ಯಾರ್ಥಿಗಳು ಸುಸ್ತಾಗಿ ಕುಸಿದು ಬಿದ್ದ ಘಟನೆ ಕೂಡ ನಡೆಯಿತು.

Edited By : Somashekar
PublicNext

PublicNext

01/11/2026 09:56 pm

Cinque Terre

4.49 K

Cinque Terre

0

ಸಂಬಂಧಿತ ಸುದ್ದಿ