ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಸಚಿವ ಎಂ.ಬಿ. ಪಾಟೀಲರಿಂದ ಧ್ವಜಾರೋಹಣ

ವಿಜಯಪುರ : 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಭಾನುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಧ್ವಜಾರೋಹಣದ ಬಳಿಕ ಸಚಿವ ಎಂ.ಬಿ. ಪಾಟೀಲ ಅವರು ತೆರೆದ ವಾಹನದಲ್ಲಿ ಕ್ರೀಡಾಂಗಣದಲ್ಲಿ ಸಂಚರಿಸಿ ವಿವಿಧ ತಂಡಗಳ ಪಥಸಂಚಲನವನ್ನು ವೀಕ್ಷಿಸಿದರು. ಪೊಲೀಸ್, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಒಟ್ಟು 17 ಪಥಸಂಚಲನ ತಂಡಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.

ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ಸ್ಮರಣೆಯೊಂದಿಗೆ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

Edited By : Somashekar
PublicNext

PublicNext

01/11/2026 10:00 pm

Cinque Terre

4.22 K

Cinque Terre

0

ಸಂಬಂಧಿತ ಸುದ್ದಿ