ಯಾದಗಿರಿ: ಹಿಂದುಳಿದ ಯಾದಗಿರಿ ಜಿಲ್ಲೆಗೆ ರೈಲ್ವೆ ಸಂಪರ್ಕದ ದೃಷ್ಟಿಯಿಂದ ಮಹತ್ವದ ಸೌಲಭ್ಯ ದೊರೆತಿದೆ. ಬೆಂಗಳೂರು ಟು ಮುಂಬೈ ಸಂಚರಿಸುವ ವಂದೇ ಭಾರತ್ ಸ್ಲೀಪರ್ ರೈಲಿಗೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸಲಾಗಿದ್ದು, ಜಿಲ್ಲೆಯ ಪ್ರಯಾಣಿಕರಿಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಬಂಪರ್ ಗಿಫ್ಟ್ ಸಿಕ್ಕಿದೆ ಯಾದಗಿರಿ ರೈಲು ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರ, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ವಂದೇ ಭಾರತ್ ರೈಲಿಗೆ ಯಾದಗಿರಿಯಲ್ಲಿ ನಿಲುಗಡೆ ಕಲ್ಪಿಸುವಂತೆ ಶಾಸಕ ಶರಣಗೌಡ ಕಂದಕೂರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಅಲ್ಲದೆ, ಹಿಂದುಳಿದ ಜಿಲ್ಲೆಯ ರೈಲ್ವೆ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ಮೂಲಕ ಕೇಂದ್ರ ರೈಲ್ವೆ ಇಲಾಖೆಗೆ ಒತ್ತಡ ತಂದು ಸಚಿವರಾದ ಶ್ರೀ ಸೋಮಣ್ಣ ಅವರು ಆಪ್ತರಾಗಿರುವ ಶಾಸಕ ಶರಣಗೌಡ ಕಂದುಕುರವರ ದಿಟ್ಟ ನಡೆಯಿಂದ ಯಾದಗಿರಿ ಜಿಲ್ಲೆಯಲ್ಲಿ ವಂದೇ ಭಾರತ್ ರೈಲ್ವೆ ನಿಲುಗಡೆ ಪಡೆದುಕೊಂಡಿದೆ
ಶಾಸಕರ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ಯಾದಗಿರಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಕ್ರಮ ಕೈಗೊಂಡಿದೆ. ಇದರಿಂದ ಜಿಲ್ಲೆಯ ಪ್ರಯಾಣಿಕರಿಗೆ ಬೆಂಗಳೂರು ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದರು. ಹಿಂದುಳಿದ ಯಾದಗಿರಿ ಜಿಲ್ಲೆಯ ರೈಲ್ವೆ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಇಂತಹ ಸೌಲಭ್ಯಗಳು ಮತ್ತಷ್ಟು ವೇಗ ನೀಡಲಿವೆ ಎಂಬ ಆಶಾಭಾವನೆ ಜಿಲ್ಲೆಯ ಜನರಲ್ಲಿ ಮೂಡಿದೆ.
PublicNext
01/11/2026 10:23 pm
LOADING...