ಸಕಲೇಶಪುರ: ತಾಲ್ಲೂಕಿನ ಬಾಳಗೋಡು ಗ್ರಾಮದ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಿಮಾ ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 30ರಂದು ಮೃತಪಟ್ಟಿದ್ದಾರೆ.
ಮಂಗಳೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಹಿಮಾ ಅವರ ಸಾವಿಗೆ ಇನ್‌ಸ್ಟಾಗ್ರಾಂನಲ್ಲಿ ಫೋಟೋ ಪ್ರಕಟಿಸುವ ವಿಚಾರವಾಗಿ ನೌಶಾದ್ ಎಂಬಾತ ಬೆದರಿಕೆ ಹಾಕಿದ್ದೇ ಕಾರಣ ಎಂದು ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ತಿಳಿದು ಶಾಸಕ ಸಿಮೆಂಟ್ ಮಂಜು, ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಇತರ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಕುರಿತು ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ರಘು, ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಆರೋಪಿಗೆ ಕಾನೂನು ಪ್ರಕಾರ ಶಿಕ್ಷೆಯಾಗುವಂತೆ ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರಕರಣದಲ್ಲಿ ನ್ಯಾಯ ದೊರಕದಿದ್ದರೆ ಹಿಂದೂ ಸಮಾಜ ಮತ್ತು ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಸಾಮಾಜಿಕ ಜಾಲತಾಣದ ಫೋಟೋಗಳ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡುವ ಹಕ್ಕಿಲ್ಲ. ಹಿಮಾ ಸಾವಿನ ಸತ್ಯ ಹೊರಬಂದು ಕುಟುಂಬಕ್ಕೆ ನ್ಯಾಯ ಸಿಗಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
PublicNext
01/11/2026 10:50 pm
LOADING...