ವಿಜಯಪುರ: ಹಾಲಿನ ದರ ಏರಿಕೆ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ ದರ ಏರಿಕೆಯಿಂದ ಬರುವ ಹೆಚ್ಚುವರಿ ಹಣವನ್ನು ಕೆಎಂಎಫ್‌ಗೆ ನೀಡುವ ಬದಲು ನೇರವಾಗಿ ಹಾಲು ಉತ್ಪಾದಕ ರೈತರ ಖಾತೆಗೆ ಜಮೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಂಎಫ್‌ನಲ್ಲಿ ದೊಡ್ಡ ದೊಡ್ಡ ತಿಮಿಂಗಿಲಗಳಿವೆ. ಕೆಎಂಎಫ್ ಅಧ್ಯಕ್ಷರಾದವರು ಒಬ್ಬ ಕ್ಯಾಬಿನೆಟ್ ಸಚಿವರಿಗಿಂತಲೂ ಹೆಚ್ಚು ಹಣ ಗಳಿಸುತ್ತಾರೆ ಎಂದು ಆರೋಪಿಸಿದರು.
ಸರ್ಕಾರ ಸಾವಿರಾರು ಕೋಟಿ ರೂಪಾಯಿ ಸಬ್ಸಿಡಿ ನೀಡುತ್ತಿದೆ. ಆದರೆ ಆ ಹಣ ಸಮರ್ಪಕವಾಗಿ ಬಳಕೆಯಾಗುತ್ತಿದೆಯೇ ಎಂಬ ಪ್ರಶ್ನೆ ಇದೆ. ಸಬ್ಸಿಡಿ ಹಣ ದುರುಪಯೋಗವಾಗುತ್ತಿದೆ ಎಂದು ಆರೋಪಿಸಿದ ಅವರು, ಹಾಲಿನ ದರ ಏರಿಕೆಯಿಂದ ದೊರೆಯುವ ಹೆಚ್ಚುವರಿ ₹8 ಅನ್ನು ನೇರವಾಗಿ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿದರು.
PublicNext
01/11/2026 10:53 pm
LOADING...