ಮಂಡ್ಯ : ಮೈಸೂರಿನ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ನವಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಸರಳವಾಗಿ ಅವರ ನಿಶ್ಚಿತಾರ್ಥ ಸಮಾರಂಭ ನೆರವೇರಿದೆ.
ಕೆ.ಆರ್.ಪೇಟೆಯ ಡಾ. ಶ್ರೀನಿಧಿ ಅವರೊಂದಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಡಾ. ಆರ್. ರಾಜೇಶ್ವರಿ ರವಿಕುಮಾರ್ ಅವರ ಪುತ್ರಿ ಡಾ. ಶ್ರೀನಿಧಿ.
ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದ ಜೋಡಿ, ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದೆ. ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಇದೀಗ ನಿಶ್ಚಿತಾರ್ಥದ ಮೂಲಕ ಹೊಸ ಜೀವನದ ಪಯಣಕ್ಕೆ ಮುನ್ನುಡಿ ಬರೆದಿದೆ. ನವಜೋಡಿಗೆ ಕುಟುಂಬಸ್ಥರು ಶುಭ ಹಾರೈಸಿದ್ದಾರೆ.
Kshetra Samachara
02/11/2026 07:23 am
LOADING...