ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು: ಸಚಿವ ಕೃಷ್ಣ ಬೈರೇಗೌಡ......

ತುಮಕೂರು : ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ಜಿಲ್ಲಾಡಳಿತದ ವತಿಯಿಂದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಂದು ಧ್ವಜಾರೋಹಣ ನೆರವೇರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಐಟಿ-ಬಿಟಿ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷಿಕರಿಗೆ ಉದ್ಯೋಗದಲ್ಲಿ ಆದ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನ ಸಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಜಿಎಸ್‌ಟಿ ವ್ಯವಸ್ಥೆಯಲ್ಲಿ ಬದಲಾವಣೆ ತಂದ ನಂತರ ರಾಜ್ಯದ ಆದಾಯ ಕಡಿತಗೊಂಡಿದೆ. ದೇಶದಲ್ಲೇ ಕರ್ನಾಟಕ ರಾಜ್ಯವು ಹೆಚ್ಚಿನ ಪ್ರಮಾಣದಲ್ಲಿ ಜಿಎಸ್‌ಟಿ ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾಗಿದೆ. ಬೆಂಗಳೂರು ನಗರವು ಅತಿ ಹೆಚ್ಚು ಆದಾಯ ತೆರಿಗೆ ಸಂಗ್ರಹವಾಗುವ ನಗರಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೂ, ರಾಜ್ಯಕ್ಕೆ ದೊರೆಯುವ ತೆರಿಗೆಯ ಪಾಲು ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಅಭಿಪ್ರಾಯಪಟ್ಟರು.

ಕೇಂದ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ರಾಜ್ಯಗಳಿಗೂ ಅಗತ್ಯ ನೆರವು ನೀಡಬೇಕು. ಆದರೆ, ಕರ್ನಾಟಕದಿಂದ ಸಂಗ್ರಹವಾಗುವ ತೆರಿಗೆ ಹಣದ ಸಮರ್ಪಕ ಪಾಲು ರಾಜ್ಯಕ್ಕೆ ದೊರೆಯುವುದು ಅತ್ಯಗತ್ಯ. ಇತರ ರಾಜ್ಯಗಳ ಅಭಿವೃದ್ಧಿಗೆ ಕರ್ನಾಟಕದ ತೆರಿಗೆ ಹಣವನ್ನು ವ್ಯಯಿಸಲಾಗುತ್ತಿದೆ. ಹೆದ್ದಾರಿಗಳ ನಿರ್ಮಾಣ ಸೇರಿದಂತೆ ದೇಶದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯದ ತೆರಿಗೆ ಆದಾಯ ಬಳಕೆಯಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಆರ್ಥಿಕವಾಗಿ ಬಲಿಷ್ಠವಾದರೆ ದೇಶದ ಆರ್ಥಿಕ ಬೆಳವಣಿಗೆಗೂ ಹೆಚ್ಚಿನ ಶಕ್ತಿ ದೊರೆಯುತ್ತದೆ. ಆದ್ದರಿಂದ ರಾಜ್ಯವು ಪಾವತಿಸುವ ತೆರಿಗೆಗೆ ಅನುಗುಣವಾಗಿ ಹೆಚ್ಚಿನ ಪಾಲು ದೊರೆಯಬೇಕು. ಇದರಿಂದ ಕರ್ನಾಟಕಕ್ಕೆ ನ್ಯಾಯ ಸಿಕ್ಕಂತಾಗುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದರು.

ಭಾಷೆ ಮತ್ತು ಸಂಸ್ಕೃತಿಯ ಆಧಾರದಲ್ಲಿ ಜನರನ್ನು ವಿಭಜಿಸುವ ಬದಲು ಎಲ್ಲ ಭಾಷೆ ಹಾಗೂ ಸಂಸ್ಕೃತಿಗಳಿಗೆ ಸಮಾನ ಗೌರವ ನೀಡಬೇಕು. ಪರಸ್ಪರ ಗೌರವ ಮತ್ತು ಸಹಬಾಳ್ವೆಯಿಂದ ಮಾತ್ರ ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಶೀಘ್ರ ಗುಣಮುಖರಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದರು.

Edited By : PublicNext Desk
PublicNext

PublicNext

02/11/2026 08:15 am

Cinque Terre

3.72 K

Cinque Terre

0

ಸಂಬಂಧಿತ ಸುದ್ದಿ