ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಬಗ್ಗೂರು ಕ್ರಾಸ್‌ನ ನಾಯರ್ ಪೆಟ್ರೋಲ್ ಬಂಕ್ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಸವಾರ ಶಂಭುಲಿಂಗ ಅವರಿಗೆ ಗಂಭೀರ ಗಾಯಗಳಾಗಿವೆ. ಹಿಂಬದಿ ಸವಾರ ಲೋಕಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿರುಗುಪ್ಪದಿಂದ ಕೆ. ಸೂಗೂರು ಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಾಯಾಳು ಶಂಭುಲಿಂಗ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಹೊನ್ನುರಸ್ವಾಮಿ ಕೆ.ಟಿ. ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ.
PublicNext
02/11/2026 08:21 am
LOADING...