ಶಿಗ್ಗಾವಿ : ಗ್ರಾಮ ಆಡಳಿತಾಧಿಕಾರಿ (ವಿಎ) ನೇಮಕಾತಿ ಪರೀಕ್ಷೆಯಲ್ಲಿ 151 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಹಾನಗಲ್ ಪಟ್ಟಣದ ಶಂಕರ್ ಬನ್ನೂರು ಎಂಬ ಅಭ್ಯರ್ಥಿಯನ್ನು ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿಗ್ಗಾವಿ ಪೊಲೀಸರು ಬಂಧಿಸಿದ್ದಾರೆ.
ಶಿಗ್ಗಾವಿಯಲ್ಲಿ ನಡೆದ ಪರೀಕ್ಷೆಯಲ್ಲಿ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಕೊಂಡೊಯ್ದಿದ್ದ ಶಂಕರ್, ಗೂಗಲ್ ಲೆನ್ಸ್ ಮೂಲಕ ಪ್ರಶ್ನೆಪತ್ರಿಕೆಯನ್ನು ಸ್ಕ್ಯಾನ್ ಮಾಡಿ ಉತ್ತರಗಳನ್ನು ಬರೆದಿದ್ದ ಎನ್ನಲಾಗಿದೆ. ಈ ದೃಶ್ಯ ಪರೀಕ್ಷಾ ಕೇಂದ್ರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದೇ ಪುರಾವೆಯ ಆಧಾರದ ಮೇಲೆ ಶಂಕರ್‌ನನ್ನು ವಶಕ್ಕೆ ಪಡೆಯಲಾಗಿದೆ.
ಹಗலಿರುಳು ಓದಿ ಸಾಧನೆ ಮಾಡದಿದ್ದರೂ, ಮೊಬೈಲ್ ಬಳಸಿ ಪರೀಕ್ಷೆ ಬರೆದ ಆರೋಪ ಇದೀಗ ಅಭ್ಯರ್ಥಿಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಗಳಿಸಿದ ಅಂಕಗಳ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಕೆಪಿಎಸ್‌ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿಗಳ ಮೇಲೆ ಒಂದಿಷ್ಟು ವಿಶ್ವಾಸವಿತ್ತು. ಶಿಗ್ಗಾವಿಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಕೊಂಡೊಯ್ಯುವಷ್ಟು ಸುಲಭವಾಗಿ ಅವಕಾಶ ಸೃಷ್ಟಿಯಾಗಿದ್ದಾದರೂ ಹೇಗೆ? ಎಂಬ ಪ್ರಶ್ನೆ ಉದ್ಭವಿಸಿದೆ.
ವರದಿ: ರಮೇಶ್ ಸೋಮಕ್ಕನವರ್, ಪಬ್ಲಿಕ್ ನೆಕ್ಸ್ಟ್
PublicNext
02/11/2026 09:23 am
LOADING...