ಸಕಲೇಶಪುರ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಮಾಜಸೇವಕ ಪ್ರತಾಪ್ ಗೌಡ ಅವರ ಪಾರ್ಥಿವ ಶರೀರ ಸಕಲೇಶಪುರಕ್ಕೆ ಆಗಮಿಸುತ್ತಿದ್ದಂತೆ ಪಟ್ಟಣದಲ್ಲಿ ಶೋಕದ ವಾತಾವರಣ ಆವರಿಸಿತು. ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಮಾಜಿ ಶಾಸಕರಾದ ಎಚ್.ಎಂ. ವಿಶ್ವನಾಥ್, ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಆದಿಚುಂಚನಗಿರಿ ಹಾಸನ ಶಾಖೆಯ ಮಠದ ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಾಪ್ ಗೌಡರ ಪಾರ್ಥಿವ ಶರೀರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಸಮಾಜಮುಖಿ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಸ್ಥಾನ ಪಡೆದಿದ್ದ ಪ್ರತಾಪ್ ಗೌಡ ಅವರ ಅಕಾಲಿಕ ಅಗಲಿಕೆ ಸಕಲೇಶಪುರದ ಜನತೆಗೆ ತುಂಬಲಾರದ ನಷ್ಟವಾಗಿದ್ದು, ಅವರ ಅಂತಿಮ ದರ್ಶನದ ವೇಳೆ ಹಲವರ ಕಣ್ಣುಗಳು ತೇವಗೊಂಡಿದ್ದವು.
PublicNext
02/11/2026 12:50 pm
LOADING...