ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಂಬೇಡ್ಕರ್ ವಸತಿ ಶಾಲೆಯಲ್ಲಿ 160 ಹಣ್ಣಿನ ಗಿಡಗಳ ನಾಟಿ

ಮೈಸೂರು : ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಾಮಾಜಿಕ ಅರಣ್ಯೀಕರಣ ಮತ್ತು ಗಿಡ ನಾಟಿ ಕಾರ್ಯಕ್ರಮವು ಅ. 31ರಂದು ಕೆ.ಆರ್. ನಗರದ ಸಾಲಿಗ್ರಾಮ ಯೋಜನಾ ಕಚೇರಿ ವ್ಯಾಪ್ತಿಯ ಹೊಸೂರು ವಲಯದ ಮಾಯಗೌಡನಹಳ್ಳಿ ಕಾರ್ಯಕ್ಷೇತ್ರದ ಸಕ್ಕರೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ 160 ಹಣ್ಣಿನ ಗಿಡಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವುದರ ಜೊತೆಗೆ ಶಾಲೆಯ ಪರಿಸರವನ್ನು ಹಸಿರಿನಿಂದ ಕಂಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಸುರೇಶ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿಯ ಜೊತೆಗೆ ಶಾಲೆಗಳಲ್ಲಿ ಗಿಡ ನಾಟಿಯಂತಹ ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರವಾಗಿದೆ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮಗಳ ಅಭಿವೃದ್ಧಿಗಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದು ಅಭಿಪ್ರಾಯಪಟ್ಟರು.

ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಹಾಗೂ ಆತ್ಮವಿಶ್ವಾಸ ಹೆಚ್ಚಲು ಸಹಕಾರಿಯಾಗಲಿದೆ. ಅಲ್ಲದೆ, ಶಾಲೆಯ ವಾತಾವರಣವನ್ನು ಸ್ವಚ್ಛವಾಗಿ ಮತ್ತು ಹಸಿರಿನಿಂದ ಕೂಡಿರುವಂತೆ ಇರಿಸಲು ಅನುಕೂಲವಾಗಲಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಮಮತಾ ರಾವ್, ಯೋಜನಾಧಿಕಾರಿ ಉಮೇಶ್ ಪೂಜಾರಿ, ಕೃಷಿ ಮೇಲ್ವಿಚಾರಕ ಮನು ವಿ., ಶಾಲೆಯ ಪ್ರಾಂಶುಪಾಲ ಸುರೇಶ್, ಹಾಸ್ಟೆಲ್ ವಾರ್ಡನ್ ಮಂಜು, ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು, ತಾಲೂಕು ವಿಚಕ್ಷಣಾಧಿಕಾರಿ ಅಶೋಕ್ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Edited By :
PublicNext

PublicNext

02/11/2026 01:28 pm

Cinque Terre

5.15 K

Cinque Terre

0

ಸಂಬಂಧಿತ ಸುದ್ದಿ