ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ಹೊಸೂರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜೆ

ರಾಯಚೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಯಚೂರು ತಾಲೂಕಿನ ಹೊಸೂರು ವಲಯದಲ್ಲಿ ಸಾಮೂಹಿಕ ಶ್ರೀ ಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಆಯೋಜಿಸಲಾಯಿತು.

108 ಸಾವಿರ ದೇವರ ಸಂಸ್ಥಾನ ಕಿಲ್ಲೆ ಬ್ರಹ್ಮನ ಮಠದ ಪೂಜ್ಯ ಶ್ರೀ ಷ.ಬ್ರ. ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಟಿ.ಡಿ. ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಯಚೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಸರ್ಕಾರದಿಂದ ನಡೆಯಬೇಕಾದ ಹಲವು ಕಾರ್ಯಗಳು ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ತಾಲೂಕು ಯೋಜನಾಧಿಕಾರಿ ಶಿವಾಜಿ ಜಿ. ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನೀಲಾಂಬಿಕ ಸಿರಾಣಿ, ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಕೆ.ಎಂ. ಪಾಟೀಲ್, ಶ್ರೀ ಗಿರಿ ಅಭಯ ಆಂಜನೇಯ ಸ್ವಾಮಿ ಸೇವಾ ಸಮಿತಿ ಮಾರುತಿ ನಗರದ ಅಧ್ಯಕ್ಷ ಬಿ. ಬಸವರಾಜ್, ಎಸ್. ಹುಸೇನ್ ಶಿಕ್ಷಣ ಸಂಸ್ಥೆ ಮಾಲಿಯಾಬಾದ್‌ನ ಅಧ್ಯಕ್ಷ ಶೇಕ್ ಮಹಿಬೂಬ್, ಬಸವ ಕಿರಿಯ ಪ್ರಾಥಮಿಕ ಶಾಲೆ ಆಶಾಪುರದ ಅಧ್ಯಕ್ಷ ಅಮರೇಶ್ ಪಾಟೀಲ್ ಹಾಗೂ ಹೊಸೂರು ಗ್ರಾಮದ ಮುಖಂಡ ಡಿ. ಲಕ್ಷ್ಮಣ್ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ಶಿವಕುಮಾರ್, ಎಲ್ಲಾ ಸೇವಾಪ್ರತಿನಿಧಿಗಳು, ಸಿಎಸ್‌ಸಿ ಸೇವಾದಾರರು ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Edited By :
PublicNext

PublicNext

02/11/2026 02:14 pm

Cinque Terre

5.67 K

Cinque Terre

0

ಸಂಬಂಧಿತ ಸುದ್ದಿ