ಕೊಪ್ಪಳ : ಬಲ್ದೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟದ ಸಂದರ್ಭದಲ್ಲಿ ಗವಿಶ್ರೀಗಳ ವಿರುದ್ಧ ವ್ಯಕ್ತವಾದ ಹೇಳಿಕೆ ವಿಚಾರವಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗವಿಮಠದ ಶ್ರೀಗಳ ವಿರುದ್ಧ ಮಾತನಾಡುವವರ ವಿರುದ್ಧ ಕಿಡಿಕಾರಿದ ಸಚಿವರು, “ಗವಿಮಠದ ಸ್ವಾಮಿಗಳ ವಿರುದ್ಧ ಮಾತನಾಡಿದರೆ ನಾವು ಯಾರೂ ಸಹಿಸುವುದಿಲ್ಲ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗವಿಶ್ರೀಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಹಾಗೂ ಅವರ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯನ್ನು ಟೀಕಿಸುವವರ ವಿರುದ್ಧ ಸಚಿವರು ತಿರುಗೇಟು ನೀಡಿದ್ದಾರೆ. ಸಚಿವರ ಈ ಹೇಳಿಕೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
PublicNext
02/11/2026 04:32 pm
LOADING...