ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ : ವನ್ಯಜೀವಿಗಳ ಹಾವಳಿಗೆ ಅಪಾರ ಬೆಳೆ ನಾಶ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತರು

ಶೃಂಗೇರಿ : ಕಾಫಿನಾಡಿನಲ್ಲಿ ಕಾಡುಕೋಣ, ಕಾಡುಹಂದಿ ಹಾಗೂ ಮಂಗಗಳ ನಿರಂತರ ಹಾವಳಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದ್ದು, ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆ. ಶೃಂಗೇರಿ ತಾಲೂಕಿನ ಸಸಿಮನೆ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ವನ್ಯಜೀವಿಗಳ ದಾಳಿಯಿಂದ ಕೃಷಿ ನಾಶವಾಗಿ ರೈತರು ಕಣ್ಣೀರು ಹಾಕುತ್ತಿದ್ದರೂ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಜಾಣಕಿವುಡು ಪ್ರದರ್ಶಿಸುತ್ತಿದ್ದಾರೆ ಎಂದು ಸ್ಥಳೀಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರು ತಮ್ಮ ಜಮೀನುಗಳಲ್ಲಿ ಆಗಿರುವ ಬೆಳೆ ಹಾನಿಯ ಕುರಿತು ಮಾಹಿತಿ ನೀಡಿದರೂ ಸಂಬಂಧಪಟ್ಟ ಇಲಾಖೆಗಳು ಕನಿಷ್ಠ ಸ್ಪಂದನೆಯನ್ನೂ ನೀಡುತ್ತಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳೆ ಹಾನಿಯಾದಾಗ ಸಂಕಷ್ಟದಲ್ಲಿರುವ ರೈತರು ಕಚೇರಿಗೆ ಅರ್ಜಿ ಹಿಡಿದು ಅಲೆಯುವ ಬದಲು, ಅಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ನೈಜ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Edited By :
PublicNext

PublicNext

02/11/2026 04:49 pm

Cinque Terre

5.88 K

Cinque Terre

0

ಸಂಬಂಧಿತ ಸುದ್ದಿ