ಬಳ್ಳಾರಿಯಿಂದ ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿಯಲ್ಲಿ ಚರಂಡಿ ನೀರಿನ ಅವಾಂತರ ಸೃಷ್ಟಿಯಾಗಿದೆ
ಬಳ್ಳಾರಿ ತಾಲೂಕಿನ ಕಾರೇಕಲ್ಲು ಗ್ರಾಮದ ಬಳಿ ಹೆದ್ದಾರಿ ರಸ್ತೆಯ ಮೇಲೆಯೇ ಕಲುಷಿತ ಚರಂಡಿ ನೀರು ಹರಿಯುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ.
ಇನ್ನೊಂದೆಡೆ, ರಸ್ತೆಯಲ್ಲಿ ತಗ್ಗು-ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರ ಸಂಚಾರ ದುಸ್ತರವಾಗಿದೆ.
ವಾಹನಗಳು ವೇಗವಾಗಿ ಸಂಚರಿಸುವಾಗ ರಸ್ತೆಯ ಮೇಲಿನ ಕಲುಷಿತ ನೀರು ಪಕ್ಕದ ಹೊಲಗಳಿಗೆ ಹರಿಯುತ್ತಿದ್ದು, ಬೆಳೆ ಹಾನಿಯಾಗುವ ಆತಂಕವೂ ಎದುರಾಗಿದೆ.
ಕುಡಿಯುವ ನೀರಿನ ಸಮಸ್ಯೆಯ ನಡುವೆಯೇ ಕಲುಷಿತ ಚರಂಡಿ ನೀರಿನ ಅವಾಂತರ..ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳುತ್ತಾರಾ?
ಕೂಡಲೇ ರಸ್ತೆಯ ಸಮಸ್ಯೆ ಹಾಗೂ ಚರಂಡಿ ನೀರಿನ ಹರಿವಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವರದಿ : ಹೊನ್ನುರಸ್ವಾಮಿ ಕೆ. ಟಿ.
ಪಬ್ಲಿಕ್ ನೆಕ್ಸ್ಟ್, ಬಳ್ಳಾರಿ.
PublicNext
02/11/2026 06:20 pm
LOADING...