ಚಿಕ್ಕಮಗಳೂರು: ಕಳೆದ ಏಪ್ರಿಲ್ 14ರಂದು ಸಮೀಪದ ಬಿಳೇಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಏಕಾಏಕಿ ಕಾರು ಚಲಾಯಿಸಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ರಾಜ್ಯ ಸರ್ಕಾರ ಒಟ್ಟು 25,02,140 ರೂ. ಪರಿಹಾರವನ್ನು ಮಂಜೂರು ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಇಂದು ಆದೇಶ ಹೊರಡಿಸಿದ್ದಾರೆ ಎಂದು ಶಾಸಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಳೇಕಲ್ಲು ಗ್ರಾಮದಲ್ಲಿ ನಡೆದ ಈ ದುರ್ಘಟನೆಯಲ್ಲಿ ಸಾನ್ವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರಿಗೆ 5 ಲಕ್ಷ ರೂ. ಪರಿಹಾರವನ್ನು ಮಂಜೂರು ಮಾಡಲಾಗಿದೆ.
ಇದೇ ದುರ್ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿದ್ದು, ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಗಾಯಗೊಂಡಿದ್ದ ಏಳು ಮಂದಿಗೆ ಚಿಕಿತ್ಸಾ ವೆಚ್ಚವಾಗಿ 20,02,140 ರೂ. ಮಂಜೂರು ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Kshetra Samachara
02/11/2026 07:42 pm
LOADING...