ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಕಚೇರಿ ಮೇಲೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇ-ಖಾತೆ ಮಾಡಿಕೊಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ ಮುಂಗಡ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ನಗರಸಭೆಯ ಎಸ್‌ಡಿಎ ಅಧಿಕಾರಿ ನಾಗರಾಜ್ ಹಾಗೂ ಎ2 ಆರೋಪಿಯಾಗಿ ಮಾಜಿ ಕೌನ್ಸಿಲರ್ ಮೌಲ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳಿಂದ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.
PublicNext
02/11/2026 09:50 pm
LOADING...